ಹೊಸದಿಗಂತ ವರದಿ,ವಿಜಯಪುರ:
ಚಲಿಸುತ್ತಿದ್ದ ಆಟೋದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಆಟೋ ಭಸ್ಮಗೊಂಡಿರುವ ಘಟನೆ ನಗರದ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.
ಆಟೋದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಆಟೋದಲ್ಲಿನ ಪ್ರಯಾಣಿಕರು, ಆಟೋ ಚಾಲಕ ತಕ್ಷಣ ಇಳಿದುಕೊಂಡು ಜೀವ ಉಳಿಸಿಕೊಂಡಿದ್ದಾರೆ.
ಸುದ್ದಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.