ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗಾಜಿಯಾಬಾದ್ನ ಟ್ರೋನಿಕಾ ಸಿಟಿ ಕೈಗಾರಿಕಾ ಪ್ರದೇಶದ ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬೆಳಗ್ಗೆ ಸಂಭವಿಸಿದ ಬೆಂಕಿಯನ್ನು ಅಗ್ನಿಶಾಮಕ ಅಧಿಕಾರಿಗಳು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. “ಬೆಂಕಿಯ ಸಮಯದಲ್ಲಿ, ಕಾರ್ಖಾನೆಯಲ್ಲಿ ಮೂವರು ಉದ್ಯೋಗಿಗಳು ಇದ್ದರು, ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ” ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ (ಸಿಎಫ್ಒ) ರಾಹುಲ್ ಕುಮಾರ್ ತಿಳಿಸಿದ್ದಾರೆ.
ಬೆಂಕಿಯನ್ನು ನಿಯಂತ್ರಿಸಲು 24 ಅಗ್ನಿಶಾಮಕ ಟೆಂಡರ್ಗಳು ಸ್ಥಳದಲ್ಲಿಯೇ ಇದ್ದವು. ಮೂರು ಅಂತಸ್ತಿನ ಕಟ್ಟಡದ ಮೇಲಿನ ಮಹಡಿಗೆ ಬೆಂಕಿ ವೇಗವಾಗಿ ಹರಡಿತು. ಅಗ್ನಿಶಾಮಕ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.