ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಬೆಂಕಿ ಅವಘಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಆಜಾದ್‌ಪುರ ಮಂಡಿಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು ನೋವು ಬಗ್ಗೆ ಈವರೆಗೆ ವರದಿ ಆಗಿಲ್ಲ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ  ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!