ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಟಿಯ ಸಹಿತ ಕಟ್ಟಡದಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್‌ನ ನವ್ರೋಜ್ ಹಿಲ್ ಸೊಸೈಟಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಅಗ್ನಿ ಶಾಮಕ ಸಿಬ್ಬಂದಿಗಳು ಮೂರು ಜಂಬೋ ಟ್ಯಾಂಕರ್‌ಗಳ ಜೊತೆ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಟ್ಟಡ ಒಟ್ಟು 17 ಅಂತಸ್ತು ಹೊಂದಿದ್ದು, 13ನೇ ಅಂತಸ್ತಿನ ಕಟ್ಟಡದ ಅಡುಗೆಮನೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!