ಬುರ್ಜ್ ಖಲೀಫಾ ಬಳಿಯ ಗಗನಚುಂಬಿ ಕಟ್ಟಡದಲ್ಲಿ ಅಗ್ನಿ ಅವಘಡ: ವಿಡಿಯೋ ವೈರಲ್ ದೃಶ್ಯಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದುಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿಶ್ವದ ಅತಿ ಎತ್ತರ ಕಟ್ಟಡವಾದ ಬುರ್ಜ್ ಖಲೀಫಾ ಬಳಿಯ ಗಗನಚುಂಬಿ ಕಟ್ಟಡ ಎಮಾರ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ದುಬೈ ಸರ್ಕಾರದ ಒಡೆತನದ ಎಮಾರ್ ಕಂಪನಿ ನಿರ್ಮಿಸಿರುವ 8 ಬುಲೆವಾರ್ಡ್ ವಾಕ್ ಟವರ್ಸ್ ನಲ್ಲಿ ಈ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಅಪಘಾತದ ಬಗ್ಗೆ ಎಮಾರ್ ಕಂಪನಿಯಾಗಲಿ ಅಥವಾ ಸ್ಥಳೀಯ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!