ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ಈ ವೇಳೆ ಅರೆಶಿರೂರು ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಆಗುವ ವೇಳೆ ಭಾರೀ ಅವಘಡವೊಂದು ತಪ್ಪಿದೆ.
ಸಿಎಂ ಆಗಮಿಸಿದ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಹೆಲಿಪ್ಯಾಡ್ ನಲ್ಲಿ ಹಾಕುವ ಬಣ್ಣದ ಹೊಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.