ಆಂಧ್ರದ ವಿಜಯವಾಡದ ಐಎಂಎ ಹಾಲ್‌ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಆಂಧ್ರಪ್ರದೇಶದ ವಿಜಯವಾಡದ ಗವರ್ನರ್‌ಪೇಟ್‌ನಲ್ಲಿರುವ ಐಎಂಎ ಹಾಲ್‌ನಲ್ಲಿರುವ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಎಂದು ಮೂಲಗಳು ವರದಿ ಮಾಡಿವೆ.

ಇದು ಆಂಧ್ರಪ್ರದೇಶದ ವಿಜಯವಾಡದಲ್ಲಿ ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಅಗ್ನಿ ಅವಘಡವಾಗಿದೆ. ವಿಜಯವಾಡದ ಜಿಮ್ಖಾನಾ ಮೈದಾನದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನಗೊಂಡಿದ್ದರು. ಹಲವಾರು ದೀಪಾವಳಿ ಪಟಾಕಿ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದೆ.

ಪೊಲೀಸ್ ಕಮಿಷನರ್ ಕ್ರಾಂತಿ ರಾಣಾ ಮಾತನಾಡಿ, ಜಿಮಖಾನಾ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 1.5 ಎಕರೆ ವಿಸ್ತೀರ್ಣದ ಮೈದಾನ, 19 ಅಂಗಡಿಗಳಿಗೆ ಅನುಮತಿ ನೀಡಲಾಗಿದ್ದು, ಮೂರು ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಇಂದು ಬೆಳಗ್ಗೆ ಪಟಾಕಿ ಇಳಿಸುವ ವೇಳೆ ಅಪಘಾತ ಸಂಭವಿಸಿದೆ, ಅನುಮತಿ ನೀಡುವ ಮೊದಲು, ಪೊಲೀಸ್ ಸೇರಿದಂತೆ ಪುರಸಭೆ ಮತ್ತು ಅಗ್ನಿಶಾಮಕ ಇಲಾಖೆಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಖಾತ್ರಿಪಡಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!