ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 26 ರಂದು ಬಾಲಕನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಾಗ ಘಟನೆ ಬೆಳಕಿಗೆ ಬಂದಿದೆ. ತನ ದೇಹದ ಮೇಲಿನ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ, ಅವನು ತನ್ನ ಕುಟುಂಬ ಸದಸ್ಯರಿಗೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾನೆ.
ಮಗುವಿನ ಕುಟುಂಬದವರ ದೂರಿನ ಪ್ರಕಾರ, ಆರೋಪಿಗಳು ಅರ್ಶ್ ಮತ್ತು ಜುನೈದ್ ಎಂದು ಗುರುತಿಸಲಾಗಿದ್ದು, ಬಾಲಕನನ್ನು ಅವನ ಮನೆಯಿಂದ ಕರೆದೊಯ್ದು ನಂತರ ಹತ್ತಿರದ ಜಮೀನಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬುದು ತಿಳಿದುಬಂದಿದೆ.
ಅಲ್ಲೇ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ರಿಜ್ವಾನ್ ಮತ್ತು ಅಲ್ಫೆಜ್ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅಂತರ್ಜಾಲದಲ್ಲಿ ಹಂಚಿಕೊಂಡಿದ್ದಾರೆ. ಘಟನೆಯ ಬಗ್ಗೆ ದೂರು ನೀಡಲು ಅವರ ಮನೆಗೆ ಹೋದಾಗ ಆರೋಪಿಗಳು ಮಗುವಿನ ಕುಟುಂಬ ಸದಸ್ಯರನ್ನು ಥಳಿಸಿ ನಿಂದಿಸಿದ್ದಾರೆ. ಬಾಲಕನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.