ಗಣೇಶನಿಗೆ ಪ್ರೀತಿಯ ವಿದಾಯ, ಮುಂಬೈನಲ್ಲಿ ಒಂದೇ ದಿನ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಾಣಿಜ್ಯ ನಗರಿ ಮುಂಬೈ ಜನತೆ ಈ ಬಾರಿ ತಮ್ಮ ನೆಚ್ಚಿನ ಗಣೇಶನಿಗೆ ಅದ್ದೂರಿ ವಿದಾಯ ಹೇಳಿದ್ದು, ಬುಧವಾರ ಬೆಳಿಗ್ಗೆ ನಗರಾದ್ಯಂತ 37,000 ಕ್ಕೂ ಹೆಚ್ಚು ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.

ಪ್ರತಿ ವರ್ಷದಂತೆ ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿದ್ದ ಲಾಲ್‌ಬಾಗ್ ಚಾ ರಾಜ ಗಣೇಶನ ಮೂರ್ತಿಯನ್ನು ದಕ್ಷಿಣ ಮುಂಬೈನ ಗಿರ್‌ಗಾಂವ್ ಬೀಚ್‌ನಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮುಳುಗಿಸಲಾಯಿತು.  ಬೆಳಗ್ಗೆ 6 ಗಂಟೆ ವೇಳೆಗೆ ಮುಂಬೈನ ವಿವಿಧ ಕಡೆಗಳಲ್ಲಿ ಒಟ್ಟು 37,064 ಗಣೇಶ ಮತ್ತು ಗೌರಿಯ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಇವುಗಳಲ್ಲಿ 5,762 ‘ಸಾರ್ವಜನಿಕ’ ಮೂರ್ತಿಗಳು ಸೇರಿವೆ. ಒಟ್ಟು 11,713 ಮೂರ್ತಿಗಳನ್ನು ಕೃತಕವಾಗಿ ನಿರ್ಮಾಣ ಮಾಡಲಾದ ಕೊಳಗಳಲ್ಲಿ ಮುಳುಗಿಸಲಾಗಿದೆ. ನಗರದಾದ್ಯಂತ ಕೊಳಗಳನ್ನು ಸ್ಥಾಪಿಸಲಾಗಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!