Saturday, March 25, 2023

Latest Posts

ಕಾಡಾನೆ ದಾಳಿಯಿಂದ ಬಚಾವ್ ಆಗಲು ಯತ್ನಿಸಿದ ಅರಣ್ಯ ಸಿಬ್ಬಂದಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಮಡಿಕೇರಿ:

ನಿನ್ನೆ ಕಾಡಾನೆ ದಾಳಿ ಮಾಡಿದ ಸಂದರ್ಭ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದ ಅರಣ್ಯ ಸಿಬ್ಬಂದಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಚಿನಿವಾಡ ಎಂಬಲ್ಲಿ ನಡೆದಿದೆ.

ತೇಜಸ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಲವು ದಿನಗಳ ಹಿಂದೆ ಕಾಡಾನೆ ಮರಿಗೆ ಜನ್ಮ ನೀಡಿತ್ತು. ಆದರೆ ಮರಿ ಹುಟ್ಟಿದಾಕ್ಷಣ ಸಾವನ್ನಪ್ಪಿತ್ತು. ಇಂದು ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ಕಾಡಾನೆ ದಾಳಿಗೆ ಮುಂದಾಗಿದೆ. ತಕ್ಷಣ ಎಚ್ಚೆತ್ತುಕೊಂಡ ತೇಜಸ್ ಓಡಲು ಆರಂಭಿಸಿದಾಗ ಆಯತಪ್ಪಿ ಬಿದಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!