Saturday, July 2, 2022

Latest Posts

ಮೈಸೂರಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಆರೋಪಿಗಳ ಬಂಧನಕ್ಕೂ ಮುನ್ನವೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿ ನಾಲ್ವರನ್ನು ಬಂಧಿಸಿದ್ದಾರೆ
ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದ ಹತ್ತೇ ಗಂಟೆಯಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಬಂಧಸಿದ್ದಾಗಿ ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss