ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಇದ್ದು, ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ತಮಿಳುನಾಡು, ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕದಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.