ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ನಿಜವಾದ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ!! ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್ ಘೋರಿ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೆಚ್‌ಡಿಕೆ ಟಾಂಗ್ ಕೊಟ್ಟಿದ್ದಾರೆ.