ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ವರ್ತೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಬಾಲಕಿಗೆ ವಿದ್ಯುತ್ ಶಾಕ್ ತಗುಲಿದೆ. ತಕ್ಷಣವೇ ಅಲ್ಲಿದ್ದವರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಮಧ್ಯರಾತ್ರಿ ಅಪಾರ್ಟ್‌ಮೆಂಟ್‌ನಿಂದ ಜನರು ಹೊರಗೆ ಬಂದಿದ್ದು, ಪ್ರತಿಭಟನೆ ನಡೆಸಿದ್ದಾರೆ. ವಿದ್ಯುತ್ ಪೂರೈಕೆ, ಕಂಬಗಳ ನಿರ್ವಹಣೆ ಸರಿಯಾಗಿಲ್ಲ, ಇವರ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಪ್ರತಿಭಟನೆ ನಡೆಸಿದ್ದಾರೆ.
ವರ್ತೂರು ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.