ಹಾಸನದಲ್ಲಿ ಡೆಂಗ್ಯೂಗೆ ಬಾಲಕಿ ಬಲಿ , ಇದು ಜಿಲ್ಲೆಯಲ್ಲಿ ನಾಲ್ಕನೇ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನದಲ್ಲಿ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದು, ಡೆಂಗ್ಯೂಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ.

ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಮೃತಪಟ್ಟಿದ್ದಾಳೆ. ಡೆಂಗ್ಯೂನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!