ಉಡುಪಿಯ ಹುಡುಗಿಯ ಮುಡಿಗೆ 2022 ಫೆಮಿನ ಮಿಸ್ ಇಂಡಿಯಾ ಕಿರೀಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2022 ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಉಡುಪಿ ಮೂಲದ ಸಿನಿ ಶೆಟ್ಟಿ ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ರೂಬಲ್ ಶೇಕಾವತ್ ಮತ್ತು ಉತ್ತರ ಪ್ರದೇಶದ ಶಿಂತಾನಾ ಚೌಹಾಣ್ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು.
ಉಡುಪಿ ಜಿಲ್ಲೆಯ ಇನ್ನಂಜೆಯವರಾದ ಸಿನಿ ಶೆಟ್ಟಿ ಈ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಫಿನಾಲೆಯಲ್ಲಿ 21 ರ ಹರೆಯದ ಸಿನಿ ಶೆಟ್ಟಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿದ್ದಾರೆ. ಸಿನಿ, ಈ ಹಿಂದೆ‌ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಅವರು ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಾಂಗ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!