ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮನಕಲಕುವ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ.
ಅತ್ಯಾಚಾರ ನಡೆಸಿದ ಆರೋಪಿಗಳು ಅಪ್ರಾಪ್ತ ಬಾಲಕಿಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಆಕೆಯ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮಾಹಿತಿಯ ಪ್ರಕಾರ, 13 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್ ಮೂಲಕ ಮೂವರು ಆರೋಪಿಗಳಲ್ಲಿ ಒಬ್ಬನೊಂದಿಗೆ ಸ್ನೇಹ ಬೆಳೆಸಿದ್ದಳು. ಈ ಘಟನೆ ನಡೆದ ದಿನ ಆರೋಪಿ ಅವಳನ್ನು ಭೇಟಿಯಾಗಲು ಕರೆದಿದ್ದ. ಅಲ್ಲಿ ಅವನು ಇತರ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಕಾಯುತ್ತಿದ್ದ.
ಅಲ್ಲಿಗೆ ಆ ಬಾಲಕಿ ಬಂದ ತಕ್ಷಣ ಕಾರಿನಲ್ಲಿ ಹೋಗುವ ನೆಪದಲ್ಲಿ ಅವಳನ್ನು ಕರೆದೊಯ್ದರು. ಆಕೆ ಒಳಗೆ ಬಂದ ನಂತರ ಆಕೆಯನ್ನು ಹೈವೇಗೆ ಕರೆದೊಯ್ದು ಒಬ್ಬೊಬ್ಬರಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಗೆ ವಿಡಿಯೋ ಕಳುಹಿಸಿ ಸಂತ್ರಸ್ತೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ಸದ್ಯ ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ.