August 31, 2026
Monday, August 31, 2026
spot_img

ದೊಡ್ಡಮ್ಮನ ಕೈ ಹಿಡಿದು ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಥಾರ್‌, ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತನ್ನ ದೊಡ್ಡಮ್ಮನ ಕೈ ಹಿಡಿದುಕೊಂಡು ಶಾಲೆಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಥಾರ್‌ ಡಿಕ್ಕಿ ಹೊಡೆದಿದ್ದು, ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಬೀರವಾರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಹತ್ತು ವರ್ಷದ ಬಾಲಕಿ ಲಿಖಿತಾ ಮೃತಪಟ್ಟಿದ್ದಾಳೆ. ಲಿಖಿತ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ತಾಯಿ ತಿಂಡಿ ಮಾಡಿಸಿ ಕೆಲಸಕ್ಕೆ ತೆರಳಿದ್ದಾರೆ. ನಂತರ ಲಿಖಿತಾ ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇನ್ನೂ ನೆಲಮಂಗಲ ಮಾರ್ಗದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಕಾರು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಲಿಖಿತಾಳ ದೊಡ್ಡಮ್ಮ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !