ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಆವರಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹವೊಂದು ಬುಧವಾರ ಪತ್ತೆಯಾಗಿದೆ.
ಮೃತ ಬಾಲಕಿ 5ರಿಂದ 6 ವರ್ಷ ವಯಸ್ಸಿನವಳಾಗಿದ್ದು, ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.