ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಗೂಡ್ಸ್ ಆಟೋ, ಮುಂದೇನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೃಷಿ ಕೂಲಿ ಕಾರ್ಮಿಕರನ್ನ ಹೊತ್ತೊಯ್ಯುತ್ತಿದ್ದ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಸರಕಲ್ ಬಳಿಯಿರುವ ಎನ್‌ಆರ್‌ಬಿಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಕಾಲುವೆ ದಡದ ಸರ್ವೀಸ್ ರಸ್ತೆಯಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಗೂಡ್ಸ್ ಆಟೋ ಬಿದ್ದಿದೆ.

ಕಾಲುವೆಗೆ ಬಿದ್ದ ಬಳಿಕ ಚಾಲಕ ಸೇರಿ ಹತ್ತು ಜನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಈ ವೇಳೆ ಸ್ಥಳೀಯರು ಕೂಡಲೇ ಆಟೋದಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗೆ ಬಂದಿದ್ದು, ಜಮೀನುಗಳಲ್ಲಿದ್ದ ಹಗ್ಗಗಳ ಮೂಲಕ ಎಲ್ಲರನ್ನ ರಕ್ಷಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!