ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ಗಾಡಿ, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳು ಟ್ಯೂಷನ್ ಮುಗಿಸಿ ಮನೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಗೂಡ್ಸ್ ವಾಹನ ಬಂದು ಗುದ್ದಿದೆ. ಐವರು ಮಕ್ಕಳ ಗುಂಪಿಗೆ ಗಾಡಿ ಗುದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಐದು ವರ್ಷದ ರೋಹನ್ ಹಾಗೂ 8 ವರ್ಷದ ಶಾಲಿನಿ ಮೃತಪಟ್ಟಿದ್ದಾರೆ. ಇನ್ನೂ ಮೂರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಟ್ಯೂಷನ್ ಮುಗಿಸಿ ರಸ್ತೆ ದಾಟುವಾಗ ವೇಗವಾಗಿ ಬಂದ ಗೂಡ್ಸ್ ಗಾಡಿ ಮಕ್ಕಳ ಮೇಲೆ ಹರಿದಿದೆ. ಗೂಡ್ಸ್ ವಾಹನ ಚಾಲಕ ಗಾಡಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!