ಆನೆಗೊಂದಿಯ ಗತ ವೈಭವಕ್ಕೆ ಸಾಕ್ಷಿಯಾದ ಭವ್ಯ ಮೆರವಣಿಗೆ

ಹೊಸದಿಗಂತ ವರದಿ, ಗಂಗಾವತಿ:

ಐತಿಹಾಸಿಕ ವಿಶ್ವ ವಿಖ್ಯಾತ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಿಂದ ಗಗನ್ ಮಹಲ್‌ವರೆಗೆ ಮಾರ್ಚ್ 11ರಂದು ಭವ್ಯ ಮೆರವಣಿಗೆ ನಡೆಯಿತು.

ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಅಂಬಾರಿಯಲ್ಲಿನ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಗೆ ಪುಷ್ಪಾರ್ಪಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಆನೆಗೊಂದಿಯ ಗತಕಾಲದ ಸಂಸ್ಕೃತಿ, ಪರಂಪರೆಯ ಮೆಲುಕು ಹಾಕುವ ರೀತಿಯಲ್ಲಿ ವಿಜ್ರಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಉತ್ಸವದ ಮೆರವಣಿಗೆ ಸಮಿತಿ ಅಧ್ಯಕ್ಷರು ಆಗಿರುವ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ ಗಂಗಾವತಿ ತಹಶೀಲ್ದಾರರಾದ ಯು.ನಾಗರಾಜ, ತಾಲ್ಲೂಕು ಪಂಚಾಯತ್ ಇಓ ಲಕ್ಷ್ಮೀ ದೇವಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!