ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಸಂಭ್ರಮ: ಘೋಷಣೆ ಕೂಗಿ ಖುಷಿಪಟ್ಟ ಅಭಿಮಾನಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಸಂಭ್ರಮ ಮನೆಮಾಡಿದ್ದು, ಅದ್ದೂರಿಯ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ.

ಇಲ್ಲಿನ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಪಕ್ಷದ ಮುಖಂಡರು, ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪಾಲ್ಗೊಂಡಿದ್ದಾರೆ.

ಸಿದ್ದರಾಮೋತ್ಸವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ತಂಡೋಪತಂಡವಾಗಿ ಆಗಮಿಸಿದ್ದು, ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಈ ಕಾರ್ಯಕ್ರಮಮದಲ್ಲಿ ಏಳೆಂಟು ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನವೇ ಮೂರು ಲಕ್ಷಕ್ಕೂ ಹೆಚ್ಚು ಮಂದಿ ವೇದಿಕೆ ಬಳಿ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!