75ನೇ ಸ್ವಾತಂತ್ರ್ಯೋತ್ಸವಕ್ಕೆ ಬಾಹ್ಯಾಕಾಶದಿಂದ ಬಂತು ಶುಭಾಶಯ ಸಂದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತವು ತನ್ನ 75 ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಪಂಚದ ಮೂಲೆ ಮೂಲೆಗಳಿಂದಲೂ ವೈವಿಧಯಮಯ ಶುಭಾಶಯ, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನು ಹೊರತು ಪಡಿಸಿ ಬಾಹ್ಯಾಕಾಶದಿಂದಲೂ ಶುಭಾಶಯ ಸಂದೇಶವು ಬಂದಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಸ್ಪೇಸ್‌ ಸ್ಟೇಷನ್) ವಾಸಿಸುತ್ತಿರುವ ಮತ್ತು ಕೆಲಸ ಮಾಡುತ್ತಿರುವ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ ಅವರು‌ ಈ ಐತಿಹಾಸಿಕ ಕ್ಷಣದಲ್ಲಿ ದೇಶವನ್ನು ಅಭಿನಂದಿಸಿದ್ದಾರೆ.

ವೀಡಿಯೋ ಸಂದೇಶವೊಂದನ್ನು ನೀಡಿರುವ ಗಗನಯಾತ್ರಿಗಳು ಭಾರತಕ್ಕೆ 75 ವರ್ಷಗಳ ಸ್ವಾತಂತ್ರ್ಯವನ್ನು ಅಭಿನಂದಿಸಲು ಸಂತೋಷವಾಗಿದೆ ಮತ್ತು ದಶಕಗಳಿಂದ ಅಂತರರಾಷ್ಟ್ರೀಯ ಏಜೆನ್ಸಿಗಳು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೊತೆಗೆ ಅನೇಕ ಬಾಹ್ಯಾಕಾಶ ಮತ್ತು ವಿಜ್ಞಾನ ಕಾರ್ಯಾಚರಣೆಗಳಲ್ಲಿ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಇಸ್ರೋ ಅಭಿವೃದ್ಧಿಪಡಿಸುತ್ತಿರುವ ಎರಡು ದೊಡ್ಡ ಯೋಜನೆಗಳ ಕುರಿತು ಮಾತನಾಡಿದ ಸಮಂತಾ, “ಇಸ್ರೋ ಮುಂಬರುವ NISAR ಅರ್ಥ್ ಸೈನ್ಸ್ ಮಿಷನ್‌ನ ಅಭಿವೃದ್ಧಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಸಹಕಾರವು ಇಂದಿಗೂ ಮುಂದುವರೆದಿದೆ, ಅದು ನಮಗೆ ವಿಪತ್ತುಗಳನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ ಮತ್ತು ನಮ್ಮ ಬದಲಾಗುತ್ತಿರುವ ಹವಾಮಾನದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ.” ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!