April 3, 2026
Friday, April 3, 2026
spot_img

ಕಲಬುರಗಿಯನ್ನು ಬೆಚ್ಚಿ ಬೀಳಿಸಿದ ಭೀಕರ ಹ*ತ್ಯೆ: ಮಾಜಿ ಸಚಿವರ ಅಳಿಯನ ಕೊಚ್ಚಿ ಕೊ*ಲೆ

ಹೊಸದಿಗಂತ ವರದಿ ​ಕಲಬುರಗಿ:

ಕಲಬುರಗಿ ನಗರದಲ್ಲಿ ಕಳವಳ ಮೂಡಿಸುವ ಭೀಕರ ಹತ್ಯೆ ಪ್ರಕರಣ ತಡರಾತ್ರಿ ಬೆಳಕಿಗೆ ಬಂದಿದೆ. ಪಿಎನ್‌ಟಿ ಕಾಲೋನಿ ಸಮೀಪದ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ ಮಾಜಿ ಸಚಿವರ ಅಳಿಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ.

ಹತ್ಯೆಯಾದ ವ್ಯಕ್ತಿ ಅನೀಲ ರಾಠೋಡ್ (45) ಎಂದು ಗುರುತಿಸಲಾಗಿದ್ದು, ಅವರು ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯರಾಗಿದ್ದಾರೆ. ಅನೀಲ ಅವರು ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.

ತಡರಾತ್ರಿ ವೇಳೆ ಆಟೋದಲ್ಲಿ ಬಂದ ಮೂವರ ತಂಡ, ಅನೀಲ ಅವರ ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಅನೀಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ:

ಹಣಕಾಸು ವ್ಯವಹಾರ ಸಂಬಂಧಿತ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸ್ ಆಯುಕ್ತ ಶರಣಪ್ಪ ಢಗೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮ ಪರಿಶೀಲನೆಗಾಗಿ ಸೂಕೊ ತಂಡ ಹಾಗೂ ಡಾಗ್ ಸ್ಕ್ವಾಡ್ ನಿಯೋಜಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !