March 7, 2026
Saturday, March 7, 2026
spot_img

ವಿವಿಧ ಬೇಡಿಕೆ ಆಗ್ರಹಿಸಿ ಮೈಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅತಿಥಿ ಉಪನ್ಯಾಸಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಅತಿಥಿ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ.

ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೂ ಯತ್ನಿಸಿದರು. ಆದರೇ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಬಾಟಲಿ ವಶಕ್ಕೆ ಪಡೆದು, ರಕ್ಷಣೆ ಮಾಡಿದ್ದಾರೆ.

ಮತ್ತೊಂದೆಡೆ ಪ್ರತಿಭಟನೆ ವೇಳೆ ಚಾಕು ಪ್ರದರ್ಶಿಸಿ ಅತಿಥಿ ಉಪನ್ಯಾಸಕಿ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುತ್ತಿರೋ ಕೌನ್ಸೆಲಿಂಗ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿಗೊಳಿಸಲಾಗಿದೆ. 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ ಎಂಬುದಾಗಿ ಆಕ್ರೋಶವನ್ನು ಅತಿಥಿ ಉಪನ್ಯಾಸಕರು ಹೊರಹಾಕಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !