SIR ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ; ಅಂಗನವಾಡಿ ಕಾರ್ಯಕರ್ತೆ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಎಸ್‌ಐಆರ್‌ (SIR) ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಶಾಸಕರ ಸಮ್ಮುಖದಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ಸಂಭವಿಸಿದೆ. ಬಾಗೆವಾಡಿ ಗ್ರಾಮದ ರತ್ನಮ್ಮ ಬಳಿಗಾರ (43) ಮೃತಪಟ್ಟ ದುರ್ದೈವಿ. ಬಾಗೆವಾಡಿ ಗ್ರಾಮದಲ್ಲಿ ಸರ್ಕಾರದ ವಿಶೇಷ ಎಸ್‌ಐಆರ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರತ್ನಮ್ಮ ಬಿಎಲ್‌ಒ ಆಗಿ ನಿಯೋಜನೆಗೊಂಡಿದ್ದರು. ಶುಕ್ರವಾರ ಸಂಜೆ ವೇಳೆ ಶಿರಹಟ್ಟಿ ಕ್ಷೇತ್ರದ ಶಾಸಕರಾದ ಡಾ. ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ನೀಡಿ, ಎಸ್‌ಐಆರ್ … Continue reading SIR ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ; ಅಂಗನವಾಡಿ ಕಾರ್ಯಕರ್ತೆ ಸಾ*ವು!