ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಸಾಲಗಾರರ ಕಾಟಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಸವ ಲೇಔಟ್ ನಿವಾಸಿ ರಂಜಿತಾ (23) ಮೃತ ದುರ್ದೈವಿ.
ರಂಜಿತಾ ಒಂದು ಕೋಟಿಗೂ ಅಧಿಕ ಸಾಲ ಮಾಡಿದ್ದರು ಎನ್ನಲಾಗಿದೆ. ದರ್ಶನ್ ಎಂಬುವವರನ್ನ ಮದುವೆಯಾಗಿದ್ದ ರಂಜಿತಾ. ಪತಿ ದರ್ಶನ್ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಬಡ್ಡಿ ಲೆಕ್ಕದಲ್ಲಿ ರಂಜಿತಾ ಸಾಲ ಪಡೆದಿರುವ ಶಂಕೆ ವ್ಯಕ್ತವಾಗಿದ್ದು, ಸಾಲ ಕೊಟ್ಟವರು ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.