ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್ ಮೇಲೆ ಅಂಗಡಿ ಇಟ್ಟರೆ ದಂಡ ಗ್ಯಾರಂಟಿ!
ಹೌದು, ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಈಗಷ್ಟೇ ಬೆಂಗಳೂರಿನಲ್ಲಿ ಬರೋಬ್ಬರಿ 490 ಕಿಲೋಮೀಟರ್‌ನಷ್ಟು ಸುದೀರ್ಘ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ. ಮತ್ತೆ ಫುಟ್‌ಪಾತ್ ಮೇಲೆ ಯಾವ ಅಂಗಡಿಯೂ ಕಾಣಿಸಬಾರದು ಎಂದು ಖಡಕ್ ಸೂಚನೆ ನೀಡಾಗಿದೆ. ಇದನ್ನು ಕಡೆಗಣಿಸಿ ತೆರವುಗೊಳಿಸಿದ ಜಾಗದಲ್ಲಿಯೇ ಮತ್ತೆ ಅಂಗಡಿಗಳನ್ನು ಇಟ್ಟುಕೊಂಡರೆ ಭಾರೀ ದಂಡ ವಿಧಿಸಲಾಗುತ್ತದೆ.
ಜನನಿಬಿಡ ಪ್ರದೇಶಗಳಾದ ಕೆ.ಆರ್. ಮಾರ್ಕೆಟ್ ರಸ್ತೆ ಹಾಗೂ ವಿಕ್ಟೋರಿಯಾ ಆಸ್ಪತ್ರೆ ರಸ್ತೆಗಳಲ್ಲಿ ಇತ್ತೀಚೆಗೆ ಜೆಸಿಬಿಗಳ ಮೂಲಕ ದೊಡ್ಡ ಮಟ್ಟದ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ಮುಗಿದು ಮೂರ್ನಾಲ್ಕು ದಿನ ಕಳೆಯುವಷ್ಟರಲ್ಲೇ ವಿಕ್ಟೋರಿಯಾ ಆಸ್ಪತ್ರೆ ರಸ್ತೆಯ ಫುಟ್‌ಪಾತ್‌ಗಳ ಮೇಲೆ ವ್ಯಾಪಾರಸ್ಥರು ಮತ್ತೆ ಅಕ್ರಮವಾಗಿ ಅಂಗಡಿಗಳನ್ನು ಹೂಡಿ, ವ್ಯಾಪಾರ ಶುರು ಮಾಡಿದ್ದಾರೆ. ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ತೆರವುಗೊಳಿಸಿದ ಜಾಗಗಳಿಗೆ ಅಧಿಕಾರಿಗಳು ಮತ್ತೆ ಹೋಗಬೇಕು, ಬೇರೆ ಅಂಗಡಿಗಳು ಇದೆಯಾ ಎಂದು ನೋಡಬೇಕು.ಜಾಗದಲ್ಲಿ ಮತ್ತೆ ಅಕ್ರಮವಾಗಿ ವ್ಯಾಪಾರ ಆರಂಭಿಸಿದವರಿಗೆ ಸ್ಥಳದಲ್ಲೇ ಭಾರಿ ಪ್ರಮಾಣದ ದಂಡ ವಿಧಿಸಬೇಕು ಎಂದು ಸಚಿವರು ಆದೇಶಿಸಿದ್ದಾರೆ.



