ಮದ್ಯದಲ್ಲಿ ಡ್ರಗ್ಸ್ ನೀಡಿ ಹಿಂದೂ ಯುವತಿ ಮೇಲೆ ಅತ್ಯಾಚಾರ‌, ಇಬ್ಬರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.

ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ.

ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!