ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಇಂದು ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಅಪರಿಚಿತ ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ರಷ್ಯನ್ ಭಾಷೆಯಲ್ಲಿದೆ, ಬ್ಯಾಂಕ್ ಸ್ಫೋಟಿಸುವ ಎಚ್ಚರಿಕೆ ನೀಡಲಾಗಿದೆ. ಮಾತಾ ರಮಾಬಾಯಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವಲಯ ಮುಂಬೈ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.