ಅತ್ಯಂತ ಸೊಗಸಾಗಿ ಕನ್ನಡ ಮಾತನಾಡುತ್ತ ಮನೆಮಾತಾಗಿದ್ದ ಪ್ರತಿಭೆ: ಬೊಮ್ಮಾಯಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪರ್ಣಾ ಅವರ ನಿಧನಕ್ಕೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಅಪರ್ಣಾ ಅವರ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

“ಕನ್ನಡದ ಖ್ಯಾತ ನಿರೂಪಕಿ ಶ್ರೀ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ನನಗೆ ತುಂಬಾ ನೋವಾಯಿತು. ಸರಳ ಕನ್ನಡದಲ್ಲಿ ಕಾರ್ಯಕ್ರಮವನ್ನು ಸೊಗಸಾಗಿ ಪ್ರಸ್ತುತಪಡಿಸಿ ಮನೆಮಾತಾಗಿದ್ದರು. ಅವರ ನಿರ್ಗಮನದೊಂದಿಗೆ, ಕನ್ನಡ ನಾಡು ಒಬ್ಬ ಸಂಭಾವಿತ ನಿರೂಪಕಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಅಭಿಮಾನಿಗಳಿಗೆ ಮತ್ತು ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!