ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ ಮುಂದಾಗಿತ್ತು. ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು BMRCL ಒಪ್ಪಿದೆ.
BMRCL ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. BMRCLನ ಈ ನಿರ್ಧಾರದ ಬಗ್ಗೆ ಮಧ್ಯೆ ಪ್ರವೇಶಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, BMRCL ಗ್ಲೋಬಲ್ ಟೆಂಡರ್ ಕರೆದಿದ್ದರು. 10ರಲ್ಲಿ 8 ಕೆಎಂಎಫ್‌ಗೆ ಕೊಡೋಕೆ ಹೇಳಿದ್ದೇನೆ ಎಂದಿದ್ದರು. ಡಿ.ಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ BMRCL ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಮೀಟಿಂಗ್ ನಡೆಸಿ ಡಿಸಿಎಂ ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್‌ಗೆ ಅವಕಾಶ ನೀಡಲಾಗುವುದು ಎಂದರು.
ಮೀಟಿಂಗ್ ನಂತರ ಮಾತನಾಡಿದ KMF ಎಂಡಿ ಶಿವಸ್ವಾಮಿ, 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆಗೆಯಲು BMRCL ಅವಕಾಶ ಕೊಟ್ಟಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಇರಲಿದೆ ಎಂದಿದ್ದಾರೆ.