ಮಳಗಿ ಧರ್ಮಾ ಜಲಾಶಯದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ; ಪ್ರವಾಸಿಗರು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಹೊಸದಿಗಂತ ವರದಿ ಮುಂಡಗೋಡ: ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿರುವುದು ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಧರ್ಮಾ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ ಕೆಲವರು ಜಲಾಶಯದ ನೀರಿನಲ್ಲಿ ಬೃಹತ್ ಮೊಸಳೆ ಕಾಣಿಸಿಕೊಂಡಿದ್ದನು ನೋಡಿ ಅದರ ಪೋಟೋ ತೆಗೆದು ಸ್ಟೇಟ್ಸ್, ಹಾಗೂ ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಕೆಲವರು ಪ್ರತ್ಯಕ್ಷವಾಗಿ ನೀರಿನಲ್ಲಿ ಮೊಸಳೆ ನೋಡಿರುವುದಾಗಿ ತಿಳಿಸಿದ್ದಾರೆ. ಮೊಸಳೆ ಕಾಣಿಸಿಕೊಂಡಿರುವ ಮಾಹಿತಿ ಸ್ಥಳೀಯರಲ್ಲಿ ಹರಡುತ್ತಿದ್ದಂತೆ ಜಲಾಶಯದ ಬಳಿ ತೆರಳುವ ಜನರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. … Continue reading ಮಳಗಿ ಧರ್ಮಾ ಜಲಾಶಯದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ; ಪ್ರವಾಸಿಗರು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed