ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.
ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಂಡ್ಲಿ ಅರಣ್ಯ ಪ್ರದೇಶದಲ್ಲಿ ಕೂಡ ಬೆಂಕಿ ಕಾಣಿಸಿಕೊಂಡಿದೆ.
ಅರಣ್ಯ ಸಂರಕ್ಷಣಾ ದಳದ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು, ಆದಷ್ಟು ಬೇಗ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಬೆಂಕಿಗೆ ಇಲ್ಲಿಯವರೆಗೆ ಯಾವುದೇ ಕಾರಣಗಳು ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.