ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಕೇಸ್ ನಲ್ಲಿ ಸರಿಯಾದ ಸಮಯಕ್ಕೆ ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಆಟೋ ಚಾಲಕ ಭಜನ್ ಸಿಂಗ್ ರಾಣಾ ಅವರಿಗೆ ಸಂಸ್ಥೆಯೊಂದು ಶಾಲು ಹೊದಿಸಿ ಸನ್ಮಾನ ಮಾಡಿ ಚೆಕ್ ವಿತರಣೆ ಮಾಡಿದೆ.
ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ತಲುಪಿಸಿದ್ದ ಭಜನ್ ಸಿಂಗ್ ರಾಣಾ ಯಾವುದೇ ಆಟೋ ಶುಲ್ಕ ಪಡೆದಿರಲಿಲ್ಲ. ಜೀವಕ್ಕಿಂತ ಹಣ ಮುಖ್ಯವಲ್ಲ. ಹಾಗಾಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ನಾನು ಹಿಂದಿರುಗಿದೆ ಎಂದು ನೀಡಿದ್ದರು.
ರಾಣಾ ಅವರ ಈ ನಡೆದ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಭಜನ್ ರಾಣಾ ಸಿಂಗ್ ಅಂದು ಬೆಳಗಿನ ಜಾವ ನಡೆದ ಘಟನೆ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದರು. ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಟೋ ಚಾಲಕ ಭಜನ್ ಸಿಂಗ್ ರಾಣಾ ಮೂಲತಃ ಉತ್ತರಾಖಂಡದವರಾಗಿದ್ದು, ಕಳೆದ ಹಲವು ವರ್ಷಗಳಿಂದ ಮುಂಬೈನಲ್ಲಿ ನೆಲೆಸಿದ್ದಾರೆ. ಸೈಫ್ ಅಲಿ ಖಾನ್ ಪ್ರಕರಣದ ನಂತರ ಭಜನ್ ಸಿಂಗ್ ರಾಣಾ ಹೆಸರು ಮುನ್ನಲೆಗೆ ಬಂದಿದೆ. ಇದೀಗ ಖಾಸಗಿ ಸಂಸ್ಥೆಯೊಂದು ಭಜನ್ ಸಿಂಗ್ ರಾಣಾ ಅವರನ್ನು ಸನ್ಮಾನಿಸಿ 11 ಸಾವಿರ ರೂಪಾಯಿ ಚೆಕ್ ವಿತರಿಸಿ ಗೌರವಿಸಿದೆ. ಸೈಫ್ ಅಲಿ ಖಾನ್ ಕುಟುಂಬ ಸಹ ಭಜನ್ ಸಿಂಗ್ ರಾಣಾ ಅವರನ್ನು ಗೌರವಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿವೆ.