ಹೊಸದಿಗಂತ ವರದಿ ಬನವಾಸಿ:
ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಗೆ ಮಂಗಳವಾರ ಮುಂಜಾನೆ ಬೃಹತ್ ಮಾವಿನ ಮರವೊಂದು ರಾಜ್ಯ ಹೆದ್ದಾರಿಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಗುಡ್ನಾಪೂರ ಸಮೀಪ ಹಳೆಯದಾದ ಬೃಹತ್ ಪ್ರಮಾಣದ ಮಾವಿನ ಮರ ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಮರಬಿದ್ದ ಪರಿಣಾಮ ಪೊಲೀಸ್ ಇಲಾಖೆ ಬದಲಿ ಮಾರ್ಗ ಕಲ್ಪಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿದ್ದಾರೆ.
ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯತಿ, ಹೆಸ್ಕಾಂ, ಲೋಕೋಪಯೋಗಿ ಇಲಾಖೆಯಿಂದ ಮರ ತೆರವು ಕಾರ್ಯಚರಣೆ ಮಾಡಲಾಗುತ್ತಿದೆ. ಮರಬಿದ್ದು ವಿದ್ಯುತ್ ಕಂಬ, ತಂತಿಗಳಿಗೂ ಹಾನಿ ಉಂಟಾಗಿ ವಿದ್ಯುತ್ ವ್ಯತ್ಯಯುಂಟಾಗಿದೆ.