ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಿಜೆಪಿ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ತ್ರಿಪುರಾದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಈಗಾಗಲೇ ತ್ರಿಪುರಾ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ ಮತ್ತು ಆಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರು ನಡ್ಡಾ ಅವರನ್ನು ಸ್ವಾಗತಿಸಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ರ್ಯಾಲಿ ಆರಂಭವಾಗಲಿದ್ದು, ನಡ್ಡಾ ಅವರು ಮಾತನಾಡಲಿದ್ದಾರೆ.