SHOCKING NEWS | ನಿರ್ಮಾಣ ಹಂತದ ಕಟ್ಟಡದಿಂದ ಬಿತ್ತು ಬೃಹತ್ ಗಾತ್ರದ ಕಲ್ಲು, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ೪೨ನೇ ಮಹಡಿಯಿಂದ ಬೃಹತ್ ಗಾತ್ರದ ಕಲ್ಲೊಂದು ಕೆಳಗೆ ಬಿದ್ದಿದೆ.

ಮುಂಬೈನ ವರ್ಲಿ ಪ್ರದೇಶದಲ್ಲಿ ಅವಘಡ ಸಂಭವಿಸಿದ್ದು, ತಲೆಯ ಮೇಲೆ ಕಲ್ಲು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಲವು ವಾಹನಗಳು ಜಖಂಗೊಂಡಿದೆ. ಸ್ಥಳಕ್ಕೆ ಮುಂಬೈ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಕಾರಣರಾದವರ ವಿರುದ್ಧ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!