ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದವರಿದಿದ್ದು, ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಆಟೋ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಬರು ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ಮೇಲೆ ಮರ ಬಿದ್ದು ಆಟೋ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ, ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.