ಹೊಸ ದಿಗಂತ ವರದಿ, ವಿಜಯಪುರ:
ಕುಡಿದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಗಂಡನೊಬ್ಬ ಹತ್ಯೆ ಮಾಡಿದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ಬಸಮ್ಮ ಕುಂಬಾರ (50) ಕೊಲೆಯಾದ ದುರ್ದೈವಿ. ಬಸಮ್ಮ ಕುಂಬಾರ ಇವಳ ಗಂಡನಾದ ಕಲ್ಲಪ್ಪ ಕುಂಬಾರ ಈತನು, ಕೊಡಲಿಯಿಂದ ಬರ್ಬರವಾಗಿ ಕೊಲೆ ಮಾಡಿದ್ದಾನೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.