Friday, December 9, 2022

Latest Posts

ಪಂಜಾಬಿನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕನ್ನಡಿಗ ಯೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧ ಪಂಜಾಬಿನಲ್ಲಿ ಕರ್ತವ್ಯದಲ್ಲಿರುವಾಗಲೇ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
23 ವರ್ಷದ ಶಿವರಾಜ ಗಂಗಮ್ಮನವರ ಎಂಬುವವರು ಮೃತ ಯೋಧ.
2016ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಶಿವರಾಜ ಅವರು, ಪಂಜಾಬಿನ ಬಟಿಂಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಶಿವರಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ ತಿಂಗಳಲ್ಲಿ ಶಿವರಾಜ್ ಊರಿಗೆ ಬಂದು ಹೋಗಿದ್ದರು ಎಂದು ಹೇಳಲಾಗಿದೆ.
ಯೋಧ ಶಿವರಾಜ್​ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!