ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕೂಲಿ ಕಾರ್ಮಿಕನೊರ್ವ ಮೃತಪಟ್ಟರೆ, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಗುರುವಾರ ಘಟನೆ ನಡೆದಿದೆ. ರಾಯಚೂರಿನ ದೇವದುರ್ಗ ಮೂಲದ ಪರಶುರಾಮ್ (24) ಮೃತ ದುರ್ದೈವಿ. ಪೈಪ್ ಲೈನ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಕುಸಿದಿದೆ. ಕಾಂಪೌಂಡ್ ಗೋಡೆ ಪಕ್ಕದಲ್ಲಿಯೇ ಗುಂಡಿ ತೆಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಾಯಚೂರು ಮೂಲದ ಐದಾರು ಮಂದಿ ಮಣ್ಣು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಮಿಕ ಮೇಲೆಯೇ ಗೋಡೆ ಕುಸಿದಿದೆ. ಹೊಟ್ಟೆಪಾಡಿಗೆ ದೂರದ ರಾಯಚೂರಿನಿಂದ ಬಂದಿದ್ದ ಪರಶುರಾಮ್ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾನೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿವೇಶನ ಮಾಲೀಕ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಕಾರ್ಮಿಕ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.