ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟಗೊಂಡು ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಂಧರ್ ಸೆಕ್ಟರ್‌ನ ಪ್ರದೇಶದಲ್ಲಿ ಸೈನಿಕರು ಗಸ್ತು ತಿರುಗುತ್ತಿದ್ದ ವೇಳೆ ನೆಲಬಾಂಬ್ ಸ್ಫೋಟಗೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಗೊಂಡಿರುವ ಸಿಬ್ಬಂದಿಯನ್ನು ರಜೌರಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.