ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ–ಕೈಕಂಬ–ಬಿ.ಸಿ.ರೋಡ್ ರಾಜ್ಯ ಹೆದ್ದಾರಿಯ ಗುರುಪುರ–ಕೈಕಂಬ ನಡುವಿನ ಕಾಜಿಲ ಪ್ರದೇಶದಲ್ಲಿ ಮಂಗಳವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ರಸ್ತೆಗೆ ಉರುಳಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪೊಳಲಿ ದ್ವಾರ ಸಮೀಪದ ಕಡಿದಾದ ತಿರುವಿನಲ್ಲಿರುವ ಎತ್ತರದ ಗುಡ್ಡದಿಂದ ಭಾರೀ ಪ್ರಮಾಣದ ಮಣ್ಣು ಹಾಗೂ ಮುರ ಬಂಡೆಗಳು ರಸ್ತೆಗೆ ಜಾರಿಬಿದ್ದವು. ಗುಡ್ಡದ ಮೇಲ್ಭಾಗದಲ್ಲಿದ್ದ ಕೆಲವು ಬೃಹತ್ ಮರಗಳು ಸಹ ಕುಸಿಯುವ … Continue reading ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ!