February 1, 2026
Sunday, February 1, 2026
spot_img

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಮಗು ಮೇಲೆ ಚಿರತೆ ಏಕಾಏಕಿ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೈಕ್ ನಲ್ಲಿ ತೆರಳುತ್ತಿದ್ದಂತ ದಂಪತಿಗಳು, ಮಗುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಬೈಕ್ ನಿಂದ ಕೆಳಗೆ ಬಿದ್ದಂತ ದಂಪತಿಗಳು, ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಬಳಿಯಲ್ಲಿ ಚಿರತೆ ದಾಳಿಯಿಂದಾಗಿ ರೈತ ಮಹದೇವಸ್ವಾಮಿ, ಪತ್ನಿ, ಮಗುವಿಗೆ ಗಾಯವಾಗಿದೆ.

ಗಾಯಾಳುಗಳ್ನು ತಗಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !