ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಹಂಪಿಯಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಇದು ಪ್ರವಾಸಿಗರಲ್ಲಿ ಆತಂಕ ಹುಟ್ಟಿಸಿದೆ.
ಚಿರತೆಗಳು ವಿಜಯ ವಿಠ್ಠಲ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಕಂಡುಬರುತ್ತಿದ್ದು, ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ.
ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅನೇಕ ಪ್ರವಾಸಿಗರ ಕಣ್ಣಿಗೆ ಚಿರತೆ ಬಿದ್ದಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.