ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಷ್ ಅಭಿಮಾನಿಗಳ ಬಹುವರ್ಷದ ಕನಸು ಇಂದು ನನಸಾಗಿದ್ದು, ಅಂಬರೀಷ್ ಸ್ಮಾರಕವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.
ಜತೆಗೆ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನೇ ಇಡಲಾಗಿತ್ತು, ಇಂದು ಸಂಜೆ ರೇಸ್‌ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಸಂಜೆ ಮುಖ್ಯಮಂತ್ರಿಗಳು ಸ್ಮಾರಕವನ್ನು ಲೋಕಾರ್ಪಣೆ ಮಾಡದ್ದಾರೆ. ಅಭಿಮಾನಿಗಳು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಾ. ರಾಜ್ ಕುಮಾರ್ ಸಮಾಧಿ ಸಮೀಪದಲ್ಲಿ ಅಂಬರೀಶ್ ಸ್ಮಾರಕ ಮಾಡಲಾಗಿದೆ.