ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೇಮ ವೈಫಲ್ಯದಿಂದ (Love Failure) ಪ್ರಿಯಕರ ತನ್ನ ಪ್ರೇಯಸಿಯ (Lover) ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ (Hassan) ತಾಲೂಕಿನ ಕುಂತಿಗುಡ್ಡದಲ್ಲಿ (Kuntigudda) ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಇಬ್ಬರೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದವರು. ಓದುವಾಗಲೇ ಪ್ರೀತಿ ಪ್ರೇಮದ ಪಾಶಕ್ಕೆ ಸಿಲುಕಿದ್ದಾರೆ. ಇಂದು ತನ್ನ ಪ್ರೇಯಸಿಯನ್ನು ಕುಂತಿಬೆಟ್ಟಕ್ಕೆ ಕರೆದೊಯ್ದು ಕುತ್ತಿಗೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಈ ಇಬ್ಬರೂ ಹಾಸನದ ಬಳಿಯಿರುವ ಮೊಸಳೆ ಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಆದರೆ, ಲವ್ ಬ್ರೇಕಪ್ ಆಗಿತ್ತು ಎಂದು ತಿಳಿದುಬಂದಿದೆ. ನಾನು ನಿನ್ನೊಂದಿಗೆ ಮಾತನಾಡಬೇಕು ಎಂದು ಆಕೆಯನ್ನು ಹತ್ತಿರದಲ್ಲಿಯೇ ಇರುವ ಕುಂತಿ ಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.