ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ, ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದರಿಂದ ಅನಾಹುತ ತಪ್ಪಿದೆ. ಶುಕ್ರವಾರ ಸಂಜೆ ನಡೆದಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಶುಕ್ರವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ಗಂಟೆ ಮೂವತ್ತು ನಿಮಿಷದಲ್ಲಿ ಟೋಯಿಂಗ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಜಾಗೃತರಾದ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ವಾಹನದಲ್ಲಿನ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೋಯಿಂಗ್ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಾಗ ಪಕ್ಕದಲ್ಲಿ ದೊಡ್ಡ ವಿಮಾನವೂ ಇತ್ತು. ಪಕ್ಕದ ವಿಮಾನಕ್ಕೆ ಬೆಂಕಿ ವ್ಯಾಪಿಸಿದ್ದರೆ ಅಪಘಾತದ ತೀವ್ರತೆ ಹೆಚ್ಚಾಗುತ್ತಿದ್ದು, ಸಿಬ್ಬಂದಿ ಸಮಯೋಚಿತವಾಗಿ ಸ್ಪಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.  ಘಟನೆಯ ಕುರಿತು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!